Home Crime ಅಕ್ರಮ ಮರಳುಗಾರಿಕೆ ಅಡ್ಡೆಗೆ ಶಿರ್ವ ಪೊಲೀಸರ ದಾಳಿ : ಮರಳು ಸಹಿತ ಹಿಟಾಚಿ ವಶಕ್ಕೆ….!!

ಅಕ್ರಮ ಮರಳುಗಾರಿಕೆ ಅಡ್ಡೆಗೆ ಶಿರ್ವ ಪೊಲೀಸರ ದಾಳಿ : ಮರಳು ಸಹಿತ ಹಿಟಾಚಿ ವಶಕ್ಕೆ….!!

ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಗರಡಿ ಮನೆ ಎಂಬಲ್ಲಿ ಪಾಪನಾಶಿನಿ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ.

ಶಿರ್ವ ಪೊಲೀಸ್‌ ಠಾಣೆ ಪಿಎಸ್‌ಐ ಮಂಜುನಾಥ ಮರಬದ್‌ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಸ್ಥಳದಲ್ಲಿದ್ದ ಎರಡು ಟಿಪ್ಪರ್‌ ಮರಳು ಹಾಗೂ ಒಂದು ಹಿಟಾಚಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.