ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗ ಕಾರ್ಯಕ್ರಮಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಭಾನುವಾರ ಸಾವಿರಾರು ಮಂದಿ ಭಕ್ತರು ದೇವರ ದರ್ಶನ ಪಡೆದು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿದರು.
ಜಿಲ್ಲೆಯ ವಿವಿಧ ಭಾಗಗಳಷ್ಟೇ ಅಲ್ಲದೆ ಹೊರ ಜಿಲ್ಲೆಗಳಿಂದಲೂ ಭಕ್ತರು ಆಗಮಿಸಿ ಯಾಗದಲ್ಲಿ ಪಾಲ್ಗೊಂಡರು. ವೇದಘೋಷ, ಪೂಜೆ, ಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಡುವೆ ದೇವಸ್ಥಾನ ಆವರಣದಲ್ಲಿ ಭಕ್ತಿಭಾವ ಮೇಳೈಸಿತು.
ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಮಂದಿ ಭೋಜನ ಸ್ವೀಕರಿಸಿದರು. ದೇವಸ್ಥಾನ ಸಮಿತಿಯಿಂದ ಭಕ್ತರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪರ್ಯಾಯ ಮಾದರಿಯಲ್ಲಿ ನಡೆಯುತ್ತಿರುವ ಮಹಾರುದ್ರಯಾಗಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾಕ್ಷಿಯಾದರು. ದೇವಸ್ಥಾನ ಪರಿಸರದಲ್ಲಿ ದಿನವಿಡೀ ಭಕ್ತರ ಸಂಚಾರ ಕಂಡುಬಂದಿತು.




