Home Latest ಬಿಲ್ಲವ ಮುಖಂಡ ಆನಂದ ಪೂಜಾರಿ ನಿಧನ…!!

ಬಿಲ್ಲವ ಮುಖಂಡ ಆನಂದ ಪೂಜಾರಿ ನಿಧನ…!!

ಉಡುಪಿ : ಬನ್ನಂಜೆಯ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ, ಕಿದಿಯೂರು ಮೂಲದ ಆನಂದ ಪೂಜಾರಿ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ಬ್ರಹ್ಮಗಿರಿಯ ಆದರ್ಶ ವಿವಿಧೋದ್ದೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದ ಆನಂದ ಪೂಜಾರಿಯವರು ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಮೃತರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

ಮೃತರ ಅಂತ್ಯಕ್ರಿಯೆ ಸೋಮವಾರ ಇಂದು ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.