ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಸಂಭವಿಸಿದೆ.
ಪ್ರವೀಣ್ ಎಂಬವರ ಮನೆಯ ಹಿಂದಿನ ಬಾಗಿಲಿನಿಂದ ಒಳ ನುಗ್ಗಿ ಕಳ್ಳರು, ಸುಮಾರು 40,000ರೂ. ಹಣ ಮತ್ತು 19 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆಂದು ಆರೋಪಿಸಲಾಗಿದೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.