ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿ ಶಂಶುದ್ದೀನ್ ಎಂದು ಗುರುತಿಸಲಾಗಿದೆ.
ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ಸಾರಾಂಶ : ಪಿರ್ಯಾದಿದಾರರಾದ ಮಹಮ್ಮದ್ ಅಶ್ರಫ್ ಪ್ರಾಯ 40 ವರ್ಷ ಗಡಿಯಾರ, ಕೆದಿಲ ಗ್ರಾಮ, ಪೆರಮೊಗರು ಅಂಚೆ, ಬಂಟ್ವಾಳ ತಾಲೂಕು ಎಂಬವರ ದೂರಿನಂತೆ ದಿನಾಂಕ:12-09-2025 ರಂದು ಬೆಳಿಗ್ಗೆ 9.45 ಗಂಟೆಗೆ ಆರೋಪಿ ಚಾಲಕ ದೀಕ್ಷಿತ್ ಶೆಟ್ಟಿ ಎಂಬವರು KA21MD1234ನೇ ನೋಂದಣಿ ನಂಬ್ರದ ಕಾರನ್ನು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗಿ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಗಡಿಯಾರ ಅಟೋರಿಕ್ಷಾ ನಿಲ್ದಾನದ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಪಿರ್ಯಾದಿದಾರರ ಹೆಂಡತಿಯ ತಮ್ಮನಾದ ಶಂಶುದ್ದೀನ್ ಎಂಬವರು ರಾಷ್ಟ್ರೀಯ ಹೆದ್ದಾರಿಯನ್ನು ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟುತ್ತಿದ್ದ ಸಮಯ ಕಾರು ಅಪಘಾತವಾಗಿ ಶಂಶುದ್ದೀನ್ ರವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಹಾಗೂ ದೇಹದ ಇತರ ಭಾಗಗಳಿಗೆ ಗಂಭಿರ ಗಾಯಗಳಾಗಿದ್ದು ಚಿಕಿತ್ಸೆ ಬಗ್ಗೆ ಅಂಬುಲೆನ್ಸ್ ಒಂದರಲ್ಲಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಗಾಯಾಳು ಶಂಶುದ್ದೀನ್ ರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ,ಕ್ರ 119/2025 ಕಲಂ 281,125(a), BNS ಪ್ರಕರಣ ದಾಖಲಾಗಿರುತ್ತದೆ.