ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣ್ಣಗುಡ್ಡೆ ವಾಸಿ ಹಮೀದ್‌ರವರ ಪುತ್ರ ಅಬ್ದುಲ್ ರೌಫ್ ಪ್ರಾಯ 26 ವರ್ಷ ಎಂಬಾತನನ್ನು ಈ ದಿನ ದಿನಾಂಕ 19/05/2026ರಂದು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಲಾಯಿತು.
ಈತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಲು ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆರವರ ವರದಿಯ ಮೇರೆಗೆ ಮಾನ್ಯ ಪೊಲೀಸ್ ಮಹಾನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರು ರವರು ದಿನಾಂಕ 18/05/2026 ರಂದು ಬಂಧನ ಆದೇಶ ಹೊರಡಿಸಿರುತ್ತಾರೆ.
ಬಂಧಿತ ಆಸಾಮಿಯ ವಿರುದ್ದ ಉಡುಪಿ ಜಿಲ್ಲೆಯ ಮಣಿಪಾಲ, ಉಡುಪಿ ನಗರ ಹಾಗೂ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ತಲಾ 1 ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿರುತ್ತದೆ. ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಾದ 3 ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದ್ದು, ದಾಖಲಾದ 2 ಸೇವನೆ ಪ್ರಕರಣಗಳಲ್ಲಿ ಶಿಕ್ಷೆ ಆಗಿರುತ್ತದೆ.
ಬಂಧಿತ ಆರೋಪಿಯನ್ನು ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.




