ಶಿವಮೊಗ್ಗ: ಹೊಳೆ ದಾಟುತ್ತಿದ್ದಾಗ ತೆಪ್ಪ ಮಗುಚಿ ಮೂವರು ಯುವಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ನಡೆದಿದೆ.
ಮೃತನನ್ನು ಪೂರ್ಣೇಶ್ (22) ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಪೂರ್ಣೇಶ್ ಜೊತೆಯಲ್ಲಿದ್ದ ಮತ್ತಿಬ್ಬರು ಯುವಕರಾದ ಶರತ್ ಮತ್ತು ರಂಜನ್ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಚಾರ ತಿಳಿಯುತ್ತಲೇ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿ ಪೂರ್ಣೇಶ್ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಸುಮಾರು 40 ಅಡಿ ಆಳದಲ್ಲಿ ಪೂರ್ಣೇಶ್ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.