ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ಕೋಟ ಶಾಂಭವಿ ಶಾಲೆ ಎದುರು ನಡೆದಿದೆ.
ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಬಂದಿದ್ದ ಕೃಷ್ಣ ದೇವಾಡಿಗ ಅವರು ಹೆದ್ದಾರಿ ದಾಟಲು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಸಾಲಿಗ್ರಾಮದಿಂದ ಕೋಟ ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಕಾರು ನೇರವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಕೃಷ್ಣ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಕೋಟ ಜೀವನ ಮಿತ್ರ ನಾಗರಾಜ್ ಪುತ್ರನ್ ಹಾಗೂ ಕಿಶೋರ್ ಶೆಟ್ಟಿ ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣ ದೇವಾಡಿಗ ಅವರು ಮೃತಪಟ್ಟಿದ್ದಾರೆ.




