Home Crime ಸ್ಟಾಕ್ ಮಾರ್ಕೆಟ್ ಹೂಡಿಕೆ ಹೆಸರಿನಲ್ಲಿ 2 ಲಕ್ಷ ರೂ. ಆನ್‌ಲೈನ್ ವಂಚನೆ : ಕಾರ್ಕಳದಲ್ಲಿ ಪ್ರಕರಣ...

ಸ್ಟಾಕ್ ಮಾರ್ಕೆಟ್ ಹೂಡಿಕೆ ಹೆಸರಿನಲ್ಲಿ 2 ಲಕ್ಷ ರೂ. ಆನ್‌ಲೈನ್ ವಂಚನೆ : ಕಾರ್ಕಳದಲ್ಲಿ ಪ್ರಕರಣ ದಾಖಲು…!!

ಕಾರ್ಕಳ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೋರ್ವರಿಗೆ 2 ಲಕ್ಷ ರೂ. ವಂಚಿಸಿರುವ ಘಟನೆ ಕಾರ್ಕಳದಲ್ಲಿ ಬೆಳಕಿಗೆ ಬಂದಿದೆ.

ಗಣೇಶ್‌, ಕಾರ್ಕಳ ಇವರು ನೀಡಿದ ದೂರಿನಂತೆ, ದಿನಾಂಕ 23/01/2026 ರಂದು ಅಪರಿಚಿತ ವ್ಯಕ್ತಿಯೊಬ್ಬ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿದ್ದಾನೆ. ಅದರಂತೆ ಆರೋಪಿಯ ಮಾತು ನಂಬಿದ ಗಣೇಶ್‌ ಅವರು ತಮ್ಮ ಬ್ಯಾಂಕ್ ಖಾತೆಯಿಂದ ಒಟ್ಟು 2,00,000 ರೂ. ಹಣವನ್ನು ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.

ಆದರೆ ಬಳಿಕ ಆರೋಪಿಯು ಹೂಡಿಕೆ ಮಾಡಿದ ಹಣವನ್ನು ವಾಪಾಸ್ ನೀಡದೇ, ಯಾವುದೇ ಲಾಭಾಂಶವನ್ನೂ ನೀಡದೇ ಆನ್‌ಲೈನ್ ಮೂಲಕ ವಂಚನೆ ಎಸಗಿರುವುದು ತಿಳಿದುಬಂದಿದೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.