ಪುತ್ತೂರು : ಕಾರು ಹಾಗೂ ಸ್ಕೂಟರ್ ಢಿಕ್ಕಿ ಹೊಡೆದುಕೊಂಡ ಪರಿಣಾಮ ಸ್ಕೂಟರ್ ಸವಾರ ರಾಮಚಂದ್ರ ಕಾಮತ್ ಹಾಗೂ ಕಾರು ಚಾಲಕ ಶಿಜು ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಶಿಜು ಕಾರನ್ನು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ತೆಂಕಿಲದಲ್ಲಿ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.
ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




