ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಖಾಸಗಿ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿದ್ಯಾರ್ಥಿನಿಯು ತಾನು ಬೆಂಗಳೂರಿಗೆ ಹೋಗಿದ್ದು ವಾಪಸು ಬರುವುದಾಗಿ ಹೇಳಿರುವುದಾಗಿ ತಿಳಿದುಬಂದಿದೆ.
ಹಾಸ್ಟೆಲಿನಿಂದ ಮನೆಗೆ ಹೋಗುವುದಾಗಿ ತಿಳಿಸಿ ಹೋಗಿದ್ದ ವಿದ್ಯಾರ್ಥಿನಿ ಮನೆಗೂ ಹೋಗದೆ, ಹಾಸ್ಟೆಲಿಗೂ ಬಾರದೆ ನಾಪತ್ತೆ ಆಗಿರುವ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ವಿದ್ಯಾರ್ಥಿನಿಯೇ ಸ್ವತಃ ತಾನು ಬೆಂಗಳೂರಿಗೆ ಬಂದಿದ್ದು, ವಾಪಸು ಬರುವುದಾಗಿ ತಿಳಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.