ಶಂಕರ ನಾರಾಯಣ : ಇಲ್ಲಿನ ಸಿದ್ದಾಪುರ ಚಾತ್ರ ಎಂಟರ್‌ಪ್ರೈಸಸ್ ಮಾಲಕ ಉದಯ ಚಾತ್ರ (43) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸೆ. 17ರಂದು ಬೆಳಗ್ಗೆ ಕಮಲಶಿಲೆಯಲ್ಲಿ ನಡೆದ ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಗೆ ತನ್ನ ತಂದೆ, ತಾಯಿ ಹಾಗೂ ಪತ್ನಿಯ ಜತೆಯಲ್ಲಿ ಆಗಮಿಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬಳಿಕ ಸಿದ್ದಾಪುರದಲ್ಲಿರುವ ಚಾತ್ರ ಎಂಟರ್‌ಪ್ರೈಸಸ್‌ಗೆ ಹೋಗುವುದಾಗಿ ಹೇಳಿ ಹೊರಟಿದ್ದರು. ಆದರೆ ಕಮಲಶಿಲೆಯಿಂದ ತನ್ನ ಅಂಗಡಿಗೆ ಹೋಗದೆ ನೇರವಾಗಿ ಮನೆಗೆ ಹೋಗಿದ್ದು, ಮಹಡಿ ಮೇಲಿನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.