Home Crime ಉಪ್ಪಿನಂಗಡಿ : 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಉಪ್ಪಿನಂಗಡಿ : 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ 2015ರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

ಉಪ್ಪಿನಂಗಡಿ ಠಾಣೆಯ ಅಕ್ರಂ:158/2015ರ ಕಲಂ 457, 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರಂ ಎಂಬಾತನು ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

 

ಮೇ 22 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ತನಿಖೆ-2 ಪಿಎಸೈ ಕೌಶೀಕ್ ಬಿಸಿ ಅವರ ನೇತೃತ್ವದಲ್ಲಿ, ಹೆಚ್‌ಸಿ-826 ಶಿವರಾಮ್ ರೈ ಹಾಗೂ ಪಿಸಿ-2277 ಮಹದೇವ ಅವರನ್ನೊಳಗೊಂಡ ತಂಡ ಮಂಗಳೂರಿನ ಪಣಂಬೂರಿನಲ್ಲಿ ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿತು.

 

ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತನ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.