Home Crime ಬೈಂದೂರು : ದೇವಸ್ಥಾನದ ಗರ್ಭಗುಡಿಯಲ್ಲಿ ಇಟ್ಟಿದ್ದ  ಬೆಳ್ಳಿಯ ಉತ್ಸವ ಮೂರ್ತಿ ಕಳವು…!!

ಬೈಂದೂರು : ದೇವಸ್ಥಾನದ ಗರ್ಭಗುಡಿಯಲ್ಲಿ ಇಟ್ಟಿದ್ದ  ಬೆಳ್ಳಿಯ ಉತ್ಸವ ಮೂರ್ತಿ ಕಳವು…!!

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಶ್ರೀ ಯಕ್ಷೇಶ್ವರಿ ದೇವಸ್ಥಾನದ ಒಳಗಿನ ಗರ್ಭಗುಡಿಯಲ್ಲಿ ಇಟ್ಟಿದ್ದ 1 ಕೆಜಿ. ತೂಕದ ಬೆಳ್ಳಿಯ ಉತ್ಸವ ಮೂರ್ತಿಯನ್ನು ಕಳ್ಳರು‌ ಕಳ್ಳತನ ನಡೆಸಿದ ಘಟನೆ ನಡೆದಿದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ವಿವರ : ದಿನಾಂಕ 18/09/2025 ರಂದು ರಾತ್ರಿ 8:30 ಗಂಟೆಯಿಂದ ದಿ 19/09/2025 ರ ಬೆಳಿಗ್ಗೆ 6:00 ಗಂಟೆಯ ಮದ್ಯದ ಅವಧಿಯಲ್ಲಿ ಪಿರ್ಯಾದಿದಾರರಾದ ಶಿವರಾಜ್ (47),ಗೋಳಿಹೊಳೆ ಗ್ರಾಮ, ಬೈಂದೂರು ಇವರು ವಾಸವಿರುವ ಹಳೆ ಮನೆಯ ಅಂಗಳದಲ್ಲಿದ್ದ ಪಿರ್ಯಾದಿದಾರರು ಹಾಗೂ ಅವರ ಮನೆಯವರು ಪೂಜಿಸಿಕೊಂಡಿದ್ದ ಶ್ರೀ ಯಕ್ಷೇಶ್ವರಿ ದೇವಸ್ಥಾನದ ಒಳಗಿನ ಗರ್ಭಗುಡಿಯಲ್ಲಿ ಇಟ್ಟಿದ್ದ 1 ಕೆಜಿ. ತೂಕದ ಬೆಳ್ಳಿಯ ಉತ್ಸವ ಮೂರ್ತಿಯನ್ನು ಯಾರೋ ಕಳ್ಳರು ದೇವಸ್ಥಾನಕ್ಕೆ ಹಾಕಿದ ಬಾಗಿಲಿನ ಚಿಲಕ ತಗೆದು ಗರ್ಭಗುಡಿ ಒಳಗೆ ಹೋಗಿ ಕಳವು ಮಾಡಿಕೊಂಡು ಹೋಗಿರುವುದಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 167/2025 ಕಲಂ: 331 (4) 305 BNS ರಂತೆ ಪ್ರಕರಣ ದಾಖಲಾಗಿರುತ್ತದೆ.