Home Crime 55 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ವಾರೆಂಟ್ ಆಸಾಮಿ ಅರೆಸ್ಟ್…!!

55 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ವಾರೆಂಟ್ ಆಸಾಮಿ ಅರೆಸ್ಟ್…!!

ಪುತ್ತೂರು : ಸುಮಾರು 55 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಅತ್ಯಂತ ಹಳೆಯ ಪ್ರಕರಣ ಇದಾಗಿದೆ. ಈಗ ಅರೆಸ್ಟ್ ಆಗಿರುವ ಆರೋಪಿಗೆ 78 ವರ್ಷ ವಯಸ್ಸು.

1970ರಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ LPC ವಾರಂಟ್ ಆಸಾಮಿಯಾಗಿರುವ ಕೇರಳ ರಾಜ್ಯದ ಮಲಪುರಂ ಜಿಲ್ಲೆಯ ಸಿ.ಆರ್ ಚಂದ್ರನ್ (78 ) ಬಂದಿತ ಆರೋಪಿ.

ಕಳೆದ 55ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಆರೋಪಿಯನ್ನು ಇದೀಗ ಕೇರಳ ರಾಜ್ಯದ ಕ್ಯಾಲಿಕಟ್ ನ ಪುಲ್ಲಿಕಲ್ ಎಂಬಲ್ಲಿ ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳಲ್ಲಿ ಅತ್ಯಂತ ಹಳೆಯ ಪ್ರಕರಣವಾಗಿದೆ.