Home Crime 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ…!!

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ…!!

ಉಪ್ಪಿನಂಗಡಿ: 2015ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತೀಯ ದಂಡ ಸಂಹಿತೆಯ ಕಲಂ 457 ಹಾಗೂ 380ರಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಕ್ರಂ @ ಬೋಜ ಅಕ್ರಮ್ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಮಂಗಳೂರು ಕಸಬಾ ಬೇಂದ್ರೆ ನಿವಾಸಿಯಾಗಿರುವ ಆರೋಪಿಯನ್ನು ಪಣಂಬೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತನಿಖೆ-2 ವಿಭಾಗದ ಪಿಎಸ್‌ಐ ಕೌಶೀಕ್ ಬಿ.ಸಿ. ನೇತೃತ್ವದಲ್ಲಿ ಸಿಬ್ಬಂದಿಗಳಾದ ಶಿವರಾಮ್ ರೈ ಮತ್ತು ಮಹದೇವ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇದೇ ಆರೋಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.