Home Latest ಸ್ನಾನಕ್ಕೆ ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಸ್ನಾನಕ್ಕೆ ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಹಿರಿಯಡ್ಕ: ಭಂಡಾರಿಬೆಟ್ಟು ಸಮೀಪದ ಸುವರ್ಣ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಬೊಮ್ಮಾರಬೆಟ್ಟು ಗ್ರಾಮದ ನಿವಾಸಿ ರಮೇಶ್ ನಾಯಕ್ (62) ಎಂದು ಗುರುತಿಸಲಾಗಿದೆ. ಇವರು ಕೃಷಿ ಕೆಲಸ ಮಾಡಿಕೊಂಡಿದ್ದು, ಮೇ 24ರಂದು ಮಧ್ಯಾಹ್ನ ಸುಮಾರು 2:45ರ ವೇಳೆಗೆ ಭಂಡಾರಿಬೆಟ್ಟು ಸುವರ್ಣ ನದಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಕಾಲು ಜಾರಿ ನದಿಗೆ ಬಿದ್ದ ಅವರು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ರಮೇಶ್ ನಾಯಕ್ ಅವರ ತಮ್ಮ ಬಾಲಕೃಷ್ಣ ನಾಯಕ್ ಅವರು ನೀಡಿದ ದೂರಿನ ಮೇರೆಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 20/2026, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.