ಉಡುಪಿ: ಮಲ್ಪೆ ಬೀಚ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಶಾ ಯಾನೆ ಸುಮಿತ್ರ ಕೃಷ್ಣ ಮತ್ತು ರೇಖಾ ದಾನಪ್ಪ ಬಂಧಿತ ಆರೋಪಿಗಳು ಎಂದು ತಿಳಿಯಲಾಗಿದೆ.
ಈ ಇಬ್ಬರು ಆರೋಪಿಗಳು ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ವಾರೆಂಟ್ ಜಾರಿ ಮಾಡಲಾಗಿತ್ತು.
ಮಲ್ಪೆ ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ. 31ರಂದು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.





