ಬಂಟ್ವಾಳ : ಕಲ್ಲುಕೊರೆ ಹೊಂಡದಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಟ್ಲದ ಕುಳ ಗ್ರಾಮದ ಕಲ್ಲಂದಡ್ಕದಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ತಿಳಿಯಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಅಜ್ವಾನ್ ಸ್ನೇಹಿತರೊಂದಿಗೆ ಕಲ್ಲಿನ ಕೋರೆಗೆ ಈಜಲು ಹೋಗಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕನ ಮೃತದೇಹ ಇರಿಸಲಾಗಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.