Home Crime ಮಹಿಳೆಯ ಅತ್ಯಾಚಾರ ಆರೋಪದಲ್ಲಿ ಬಿಜೆಪಿ ಮುಖಂಡ ಭರತ್ ನನ್ನ ಬಂಧಿಸಿದ ಪೊಲೀಸರು…!!

ಮಹಿಳೆಯ ಅತ್ಯಾಚಾರ ಆರೋಪದಲ್ಲಿ ಬಿಜೆಪಿ ಮುಖಂಡ ಭರತ್ ನನ್ನ ಬಂಧಿಸಿದ ಪೊಲೀಸರು…!!

ಶಿವಮೊಗ್ಗ: ಭದ್ರಾವತಿಯಲ್ಲಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದ ಆರೋಪದಲ್ಲಿ ವಕೀಲ ಭರತ್ ನನ್ನು ಭದ್ರಾವತಿ ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿ ತಾಲೂಕು ಬಾರಂದೂರಿನಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಕೀಲ ಭರತ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಮನೆಯೊಂದರಲ್ಲಿ ಬಿಜೆಪಿ ಮುಖಂಡ ಭರತ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನಿಂದ ಆರೋಪಿಯನ್ನು ತಡರಾತ್ರಿ ಕರೆತರಲಾಗಿದೆ.

ಪಿಎಸ್‌ಐ ಎ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ನಾಗರಾಜ್, ಬಸವರಾಜ್ ರಿಂದ ಕಾರ್ಯಾಚರಣೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಆರೋಪದಡಿ ಭರತ್ ನ ಬಂಧನವಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.