Home Karavali Karnataka ಕಾಸರಗೋಡು : ಗಂಟಲಲ್ಲಿ ಆಮ್ಲೆಟ್ ಸಿಲುಕಿ ವ್ಯಕ್ತಿ ಸಾವು…!!

ಕಾಸರಗೋಡು : ಗಂಟಲಲ್ಲಿ ಆಮ್ಲೆಟ್ ಸಿಲುಕಿ ವ್ಯಕ್ತಿ ಸಾವು…!!

ಕಾಸರಗೋಡು : ಗಂಟಲಲ್ಲಿ ಆಮ್ಲೆಟ್ ಸಿಲುಕಿ ವ್ಯಕ್ತಿಯೊರ್ವರು ಸಾವನಪ್ಪಿದ ಘಟನೆ ಬದಿಯಡ್ಕದಲ್ಲಿ ರವಿವಾರ ಸಂಜೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಬದಿಯಡ್ಕ ಚುಳ್ಳಿಕ್ಕಾನ ನಿವಾಸಿ, ಪ್ರಸಕ್ತ ಬಾರಡ್ಕದಲ್ಲಿ ವಾಸವಿದ್ದ ವಿನ್ಸೆಂಟ್ ಕ್ರಾಸ್ತಾ(52) ಎಂದು ಗುರುತಿಸಲಾಗಿದೆ.

ವಿನ್ಸೆಂಟ್ ಸಂಜೆ ಮನೆ ಸಮೀಪದ ಗೂಡಂಗಡಿಯಿಂದ ಆಮ್ಲೆಟ್ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಮ್ಲೆಟ್ ಗಂಟಲಲ್ಲಿ ಸಿಲುಕಿ ಒದ್ದಾಡುತ್ತಿದ್ದ ವಿನ್ಸೆಂಟ್ ರನ್ನು ತಕ್ಷಣ ಕುಂಬಳೆಯ ಆಸ್ಪತ್ರೆಗೆ ಕರೆದೊಯ್ಯಲಾತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದರು.

ಬೇಳ ಕಟ್ಟತ್ತಂಗಡಿ ಎಂಬಲ್ಲಿ ವೆಲ್ಡಿಂಗ್ ಶಾಫ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಿನ್ಸೆಂಟ್ ಕ್ರಾಸ್ತಾ ಅವಿವಾಹಿತರಾಗಿದ್ದರು.. ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿ ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.