Home Karavali Karnataka ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ…!!

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ…!!

ಕೊಲ್ಲೂರು: ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆಯಾಗಿದ್ದು ಭಾರೀ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಕೈಗೊಂಡರು.

ರಿಷಬ್ ಶೆಟ್ಟಿ ಪತ್ನಿ ಸಹಿತ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ರಿಷಭ್ ದಂಪತಿ ಸಿನಿಮಾದ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ತಮ್ಮ ಪ್ರತೀ ಸಿನೆಮಾ ಬಿಡುಗಡೆಗೂ ಮುನ್ನ ರಿಷಭ್ ಶೆಟ್ಟಿ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಅದರಂತೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಅವರಿಗೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವ ಸಲ್ಲಿಸಲಾಯಿತು.