ರಾಯಚೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿರುವುದಕ್ಕೆ ರಾಯಚೂರಿನಲ್ಲಿ ವಿರೋಧ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನ ಒಂದು ವರ್ಷ ಅವಧಿಗೆ ಗಡಿಪಾರು ಮಾಡಲಾಗಿದೆ.
ಆದರೆ, ತಿಮರೋಡಿಯನ್ನ ಜಿಲ್ಲೆಗೆ ಕರೆತರಬೇಡಿ ಅಂತ ರಾಯಚೂರಿನಲ್ಲಿ ಪ್ರತಿಭಟನೆ ಮಾಡಲಾಗಿದೆ. ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸೇನೆ ಹಾಗೂ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ಮಾಡಲಾಯಿತು.
ತಿಮರೋಡಿ ನಮ್ಮ ರಾಯಚೂರು ಜಿಲ್ಲೆಗೆ ಬೇಡ, ಯಾವುದಾದರೂ ಕಾಡಿಗೆ ಕಳುಹಿಸಿ. ಜಿಲ್ಲೆಗೆ ಕಳುಹಿಸಬೇಡಿ ಅಂತ ಹೋರಾಟಗಾರರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಧರ್ಮಸ್ಥಳದ ಬುರುಡೆ ಪ್ರಕರಣ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣ ಮಾತ್ರವಲ್ಲದೆ 32 ಪ್ರಕರಣಗಳನ್ನ ಎದುರಿಸುತ್ತಿರುವ ತಿಮರೋಡಿಯನ್ನ ಮಾನ್ವಿಗೆ ಕರೆತರದಂತೆ ಒತ್ತಾಯಿಸಿದ್ದಾರೆ.



