ಉಡುಪಿ: ನಗರದ ಬ್ರಹ್ಮಗಿರಿಯಲ್ಲಿರುವ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಸಂಘದ ಅಧ್ಯಕ್ಷರಾಗಿದ್ದ ಶ್ರೀ ಆನಂದ ಪೂಜಾರಿ ಇವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಹುದ್ದೆಗೆ ಇಂದು ಮೇ ತಾ. 26ರಂದು ಚುನಾವಣೆ ನಿಗದಿಯಾಗಿತ್ತು.
ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ಇವರು ಪ್ರಸ್ತುತ ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿದ್ದು, ಈ ಹಿಂದೆ ಉಡುಪಿ ನಗರಸಭೆಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.




