ಬಿಜೆಪಿ ಐಟಿ ಸೆಲ್ ಪ್ರಖ್ಯಾತ್ ಬಿ ಜೆ ವಿರುದ್ಧ ದೂರು ದಾಖಲು
ಕಾರ್ಕಳ : ಐತಿಹಾಸಿಕ ಧಾರ್ಮಿಕ ಹಿನ್ನಲೆಯುಳ್ಳ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಿತ್ತರಿಸಿ ತೇಜೋವಧೆ ಮಾಡಿದ ಬಿಜೆಪಿ ಐಟಿ ಸೆಲ್ ನಲ್ಲಿರು ಯವ ಯುವಕನ ವಿರುದ್ದ ಕಾರ್ಕಳ ನಗರ
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ ಪ್ರಖ್ಯಾತ್ ಬಿ.ಜೆ ವಿರುದ್ಧ ದೂರು ದಾಖಲಾಗಿದ್ದು, ಈತ ವಾಟ್ಸ್ ಆಪ್, ಪೇಸ್ ಬುಕ್ ಹಾಗೂ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕುರಿತು ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ ಎಂದು ಸುಳ್ಳು ಸಂದೇಶ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಿ, ಸಮಾಜದ ಸ್ವಾಸ್ಥ ಕೆಡಿಸುತ್ತಿದ್ದಾನೆ.
ಈ ಹಿಂದೆಯೂ ಈತ ಹಲವು ಬಾರಿ ರಾಷ್ಟ್ರ ಹಾಗೂ ರಾಜ್ಯ ಕಾಂಗ್ರೇಸ್ ನಾಯಕರ ಕುರಿತು ಅವಹೇಳನ ಪದಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುತ್ತಾ ಬಂದಿರುತ್ತಾನೆ.
ಇಂತಹದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಈತನ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಸಂದರ್ಭದಲ್ಲಿ ಇನ್ನು ಮುಂದೆ ಇಂತಹ ರೀತಿ ಪೋಸ್ಟ್ ಹಾಕುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕಾನೂನು ಕುಣಿಕೆಯಿಂದ ಜಾರಿಕೊಳ್ಳುತ್ತಿದ್ದನು.
ತದನಂತರವೂ ರಾಜ್ಯದ ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಆಪಾದನೆಯನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹಾಕಿ ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾನೆ.
ಆದ್ದರಿಂದ ಈ ಬಗ್ಗೆ ಕೂಡಲೇ ಅವರನ್ನು ವಿಚಾರಿಸಿ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಕಾರ್ಕಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೋಗಿ ದೂರಿನಲ್ಲಿ ವಿವರಿಸಿದ್ದಾರೆ.
ಈ ಹಿಂದೆ ಈತ ಪತ್ರಕರ್ತರ ವಿರುದ್ಧ ಅಸಂಬದ್ಧ ಪದ ಬಳಕೆ ಮಾಡಿ ಫೇಸ್ಬುಕ್ ವಾಟ್ಸಪ್ ಗಳಲ್ಲಿ ಮೆಸೇಜನ್ನು ಬಿತ್ತರಿಸಿದ್ದ ಈ ಕುರಿತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ಎಎಸ್ಪಿ ಅವರಿಗೆ ದೂರು ನೀಡಿ ಪ್ರಖ್ಯಾತ ಬಿ.ಜೆ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿತು. ಅಲ್ಲೂ ಮುಚ್ಚಳಿಕೆ ಬರೆದು ಕಾನೂನು ಕುಣಿಕೆಯಿಂದ ಜಾರಿಕೊಂಡಿದ್ದ.
ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ ಈತ ನಿರಂತರ ಫೇಸ್ಬುಕ್ ಹಾಗೂ ವಾಟ್ಸಪ್ ನಲ್ಲಿ ಇನ್ನೊಬ್ಬರನ್ನು ತೇಜೋವಧೆ ಮಾಡಿ ಮೆಸೇಜ್ ಮಾಡುತ್ತಿದ್ದು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಬರುತ್ತಿದ್ದು ಈ ಕೂಡಲೇ ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಿಂದ ಕೇಳಿಬರುತ್ತದೆ.