Home Crime ಮೈಸೂರು : ರೈಲು ಢಿಕ್ಕಿಯಾಗಿ ವಿದ್ಯಾರ್ಥಿನಿ ಮೃತ್ಯು…!!

ಮೈಸೂರು : ರೈಲು ಢಿಕ್ಕಿಯಾಗಿ ವಿದ್ಯಾರ್ಥಿನಿ ಮೃತ್ಯು…!!

ಮೈಸೂರು : ರೈಲು ಬರುತ್ತಿರುವ ಸದ್ದು ಕೇಳದಷ್ಟು ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವಿಧ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವನಪ್ಪಿದ ಘಟನೆ ಹರಿಹರ ರೈಲು ನಿಲ್ದಾಣದಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದ ಬಳ್ಳಾರಿ ಮೂಲದ ಶ್ರಾವಣಿ (23) ಎಂದು ತಿಳಿದು ಬಂದಿದೆ.

ಶುಭ ಕಾರ್ಯಕ್ಕೆಂದು ಶ್ರಾವಣಿ ಹರಿಹರದಲ್ಲಿನ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ಮಂಗಳವಾರ ರಾತ್ರಿ ಮೊಬೈಲ್ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿದೆ. ತಲೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ವಿಭಾಗದ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.