ಉಡುಪಿ: ಜಿಲ್ಲೆಯ ವಿವಿಧ ಮೊಬೈಲ್ ಅಂಗಡಿಗಳಿಗೆ ಅಪರಿಚಿತ ವ್ಯಕ್ತಿಗಳು ಮೊಬೈಲ್ ಫೋನ್‌ಗಳನ್ನು ಮಾರಾಟ ಮಾಡಲು ಬಂದ ಘಟನೆ ಬೆಳಕಿಗೆ ಬಂದಿದೆ.
ಮೊಬೈಲ್ ಅಂಗಡಿಗಳ ಮಾಲೀಕರು ಅನುಮಾನಗೊಂಡು, ಮೊಬೈಲ್‌ಗಳನ್ನು ಸಂಚಾರ್ ಸಾಥಿ ಆಪ್ ಮೂಲಕ ಪರಿಶೀಲಿಸಿದಾಗ ಅವುಗಳು ಬ್ಲಾಕ್ ಲಿಸ್ಟ್‌ನಲ್ಲಿ ಇರುವುದಾಗಿ ಪತ್ತೆಯಾಗಿದೆ. ಬಳಿಕ ಸಂಬಂಧಪಟ್ಟ ವ್ಯಕ್ತಿಗಳ ಬಳಿ ಮೊಬೈಲ್‌ಗಳ ಸೂಕ್ತ ದಾಖಲೆಗಳನ್ನು ಕೇಳಿದಾಗ ಯಾವುದೇ ದಾಖಲೆಗಳನ್ನು ನೀಡದೇ ಇರುವುದರಿಂದ ಮತ್ತಷ್ಟು ಅನುಮಾನ ವ್ಯಕ್ತವಾಗಿದೆ.
ಈ ಹಿನ್ನೆಲೆದಲ್ಲಿ ಉಡುಪಿ ಜಿಲ್ಲಾ ಮೊಬೈಲ್ ರಿಟೈಲರ್ ಅಸೋಸಿಯೇಷನ್ ಅಧ್ಯಕ್ಷ ವಿವೇಕ್ ಜಿ ಸುವರ್ಣ ಹಾಗೂ ಸದಸ್ಯರಾದ ರಂಜಿತ್ ಶೆಟ್ಟಿ, ಸಂದೇಶ್, ಸುಧರ್ಶನ್, ಗಣೇಶ್ ಮತ್ತು ಅಭಿಷೇಕ್ ಅವರು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿ ಲಕ್ಷಾಂತರ ರೂ. ಮೌಲ್ಯದ ಏಳು ಮೊಬೈಲ್ ಫೋನ್‌ಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಹಸ್ತಾಂತರಿಸಿದರು.
ಹಸ್ತಾಂತರಿಸಲಾದ ಮೊಬೈಲ್‌ಗಳ ವಿವರಗಳು ಹೀಗಿವೆ:
Redmi Model: 25028RN031
Redmi Model: 2312DRAABI
Samsung Sky Blue Colour
Realme Model: RMX3741
HMD 64 MP AI Camera
Samsung Galaxy S24 Ultra Model: SM-S928B/DS
iQOO Aspherical High Resolution
ಪೊಲೀಸರ ಮಾಹಿತಿ ಪ್ರಕಾರ, ಈ ಮೊಬೈಲ್‌ಗಳ ಮೂಲ ವಾರಸುದಾರರನ್ನು CEIR ಪೋರ್ಟಲ್ ಮೂಲಕ ಪತ್ತೆಹಚ್ಚಿ, ಕಾನೂನು ಕ್ರಮದಂತೆ ಮೂಲ ಮಾಲೀಕರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.


ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳು:
ಅಪರಿಚಿತ ವ್ಯಕ್ತಿಗಳು ಮೊಬೈಲ್ ಮಾರಾಟಕ್ಕೆ ಬಂದಲ್ಲಿ ಮೊದಲು ಸಂಚಾರ್ ಸಾಥಿ ಆಪ್‌ನಲ್ಲಿ ಪರಿಶೀಲನೆ ಮಾಡಬೇಕು.
ಮೊಬೈಲ್ ಪರಿಶೀಲನೆಗಾಗಿ ಅಂಗಡಿ ಮಾಲೀಕರು ತಮ್ಮ ಸ್ವಂತ SIM ಕಾರ್ಡ್ ಬಳಸದೇ, ಗ್ರಾಹಕರ SIM ಕಾರ್ಡ್‌ನನ್ನೇ ಬಳಸಬೇಕು.
ಸೂಕ್ತ ದಾಖಲೆಗಳಿಲ್ಲದ ಮೊಬೈಲ್‌ಗಳನ್ನು ಖರೀದಿಸುವುದು ಅಥವಾ ಸ್ವೀಕರಿಸುವುದನ್ನು ತಪ್ಪಿಸಬೇಕು.
ಯಾವುದೇ ಅನುಮಾನಾಸ್ಪದ ಮಾಹಿತಿ ಕಂಡುಬಂದಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.




