ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಗೊಂದಲಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.
ಕರ್ನಾಟಕ ಕಾಂಗ್ರೆಸ್‌ನಲ್ಲಿ ಕಳೆದ ಮೂರು ವರ್ಷಗಳಿಂದ ದಿನನಿತ್ಯ ಕೇಳಿಬರುತ್ತಿದ್ದ ಸಿಎಂ ಹುದ್ದೆ ಬದಲಾವಣೆ, ನಾಯಕತ್ವ ಹಸ್ತಾಂತರ ಪ್ರಹಸನಕ್ಕೆ ತೆರೆ ಬೀಳುವ ಸಮಯ ಬಂದಿದೆ.
ಈ ಮೊದಲು ಮಾಡಿಕೊಳ್ಳಲಾಗಿದ್ದ ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದ ಪ್ರಕಾರವೇ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದರೊಂದಿಗೆ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.
ಇಂದು ಬೆಳಗ್ಗೆ 9ಕ್ಕೆ ಸಿದ್ದರಾಮಯ್ಯ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದಿದ್ದು ಅದರಲ್ಲಿ ಡಿ ಕೆ ಶಿವಕುಮಾರ್ ಭಾಗಿಯಾಗಿದ್ದಾರೆ.




