Home Crime ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!!

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!!

ಕಾಸರಗೋಡು : ಬೆಳ್ಳೂರು ಪಳ್ಳಪಾಡಿಯಲ್ಲಿ ಸೈನುದ್ದೀನ್ ಅವರ ಪತ್ನಿ ಸೆರಿನಾ (27) ಅವರ ಮೃತ ದೇಹ ಮನೆಯ ಸಮೀಪದ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಾವಿಗೆ ಸಂಬಂಧಿಸಿ ಅದೂರು ಪೊಲೀಸರು ಅಸಹಜ ಸಾವಿನ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.

ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿಯ ಮನೆಯವರು ದೈಹಿಕವಾಗಿಯೂ, ಮಾನಸಿಕವಾಗಿಯೂ ಕಿರುಕುಳ ನೀಡುತ್ತಿದ್ದರೆಂದು ಸೆರಿನಾ ಅವರ ಕುಟುಂಬದವರು ಆರೋಪಿಸಿದ್ದಾರೆ.

ಸಾವಿನ ಬಗ್ಗೆ ಸಂಶಯಗಳಿವೆ ಎಂದು ಮಹಿಳೆಯ ಸಹೋದರ ಪುತ್ತೂರು ನಿವಾಸಿ ಅಬ್ದುಲ್ ರಹಮಾನ್ ಅವರು ಆದೂರು ಪೊಲೀಸರಿಗೆ ದೂರು ನೀಡಿದ್ದಾರೆ.