ಕಾರ್ಕಳ : ಪಳ್ಳಿ ಸಮೀಪ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ನಾಗೇಶ್ ಆಚಾರ್ಯ (34) ಗಾಯಗೊಂಡ ಘಟನೆ ಮೇ 26ರಂದು ನಡೆದಿದೆ.
ಮೂಡುಬೆಳ್ಳೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರನ್ನು ಅದರ ಚಾಲಕನು ಸೂಚನೆ ನೀಡದೆ ನಿರ್ಲಕ್ಷ್ಯವಾಗಿ ಚಲಾಯಿಸಿ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ನಾಗೇಶ್ ಆಚಾರ್ಯ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.
ಅವರನ್ನು ಉಡುಪಿಯ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




