ಉಡುಪಿ: ಭ್ರಷ್ಟಾಚಾರದ ಆರೋಪದಿಂದ ಕೆಲವು ತಿಂಗಳ ಹಿಂದೆ ಲೋಕಾಯುಕ್ತ ದಾಳಿಗೊಳಗಾಗಿದ್ದ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀನಾರಾಯಣ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.
ಈವರೆಗಿನ ಲೋಕಾಯುಕ್ತ ತನಿಖೆಯಲ್ಲಿ ಶೇ.211.88 ರಷ್ಟು ಅಕ್ರಮ ಆಸ್ತಿ ಸಂಪಾದನೆ ಮೇಲ್ನೋಟಕ್ಕೆ ಸಾಬೀತಾಗಿದ್ದು, ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ನಿಷ್ಪಕ್ಷಪಾತ ತನಿಖೆಯ ಸಲುವಾಗಿ ದಾವಣಗೆರೆಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ವರ್ಗಾಯಿಸಿ ಆದೇಶಿಸಲಾಗಿದೆ.
ಉಡುಪಿ ಜಿಲ್ಲೆಯ ಪ್ರಭಾರವನ್ನು ಇಲಾಖೆಯ ಹಿರಿಯ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರಿಗೆ ವಹಿಸಲಾಗಿದೆ.






