Home Karnataka News ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್…!!

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್…!!

ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ನಿನ್ನೆ (ಮೇ 28) ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ನಿನ್ನೆ ಬೆಳಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ನಿರ್ಧಾರ ಪ್ರಕಟಿಸಿದ್ದರು. ತದನಂತರ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹ್ಲೋಟ್ ಅವರು ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.