ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಶಾಸ್ತ್ರೀಸರ್ಕಲ್ ಬಳಿಯ ಇರುವ SPG GOLD AND DIAMAND ಅಂಗಡಿಗೆ ಬಂದು ಚಿನ್ನ ಖರೀದಿಸುವ ನೆಪದಲ್ಲಿ ಚಿನ್ನದ ಸರ ಕಳವುಗೈದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಮೇಶ (42) ಎಂದು ಗುರುತಿಸಲಾಗಿದೆ.
ಆರೋಪಿಯು ಅಂಗಡಿಯ ಕೆಲಸದವರಿಂದ ಚಿನ್ನದ ಸರವನ್ನು ತೋರಿಸಲು ಹೇಳಿ ಅವರ ಕಣ್ಣು ತಪ್ಪಿಸಿ ಸುಮಾರು 9 ಗ್ರಾಮ್ ನ 1,25,000 ರೂ.ಬೆಲೆ ಬಾಳುವ ಚಿನ್ನದ ಸರವನ್ನು ಕಳವು ಮಾಡಿದ್ದ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 05/2026 ಕಲಂ. 305 BNS ರಂತೆ ಪ್ರಕರಣ ದಾಖಲಾಗಿತ್ತು.
ಇದೀಗ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಕಳ್ಳತನ ಮಾಡಿದ ಚಿನ್ನದ ಚೈನ್ ಮತ್ತು ಆತನ ವಶದಲ್ಲಿದ್ದ 33000 ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.



