Home Karnataka News ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾ‌ರ್ ಆಯ್ಕೆ…!!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾ‌ರ್ ಆಯ್ಕೆ…!!

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದು ನಿಶ್ಚಿತವಾಗಿತ್ತು.

ಆದರೆ ಪ್ರಕ್ರಿಯೆಯಂತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ನಾಯಕನ ಆಯ್ಕೆ ಅಧಿಕೃತವಾಗಿ ಇಂದು ನಡೆದಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿನ ಸರ್ಕಾರದಲ್ಲಿ 3 ವರ್ಷಗಳ ಕಾಲ ಡಿ.ಕೆ. ಶಿವಕುಮಾ‌ರ್ ಡಿಸಿಎಂ ಆಗಿ ಕಾರ್ಯ ನಿರ್ವಹಿಸಿದ್ದರು. ಕೆಪಿಸಿಸಿಯ ಜವಾಬ್ದಾರಿಯೂ ಅವರ ಹೆಗಲಮೇಲಿತ್ತು.