Home Karavali Karnataka ಕೋವಿಡ್ ನಂತರ ಮಾನಸಿಕ ಸಮಸ್ಯೆಗಳಲ್ಲಿ ಹೆಚ್ಚಳ ಕಂಡುಬಂದಿದೆ : ಮನೋವೈದ್ಯ ಡಾ. ಪಿ.ವಿ ಭಂಡಾರಿ…!!

ಕೋವಿಡ್ ನಂತರ ಮಾನಸಿಕ ಸಮಸ್ಯೆಗಳಲ್ಲಿ ಹೆಚ್ಚಳ ಕಂಡುಬಂದಿದೆ : ಮನೋವೈದ್ಯ ಡಾ. ಪಿ.ವಿ ಭಂಡಾರಿ…!!

ಉಡುಪಿ : ಕೋವಿಡ್ ನಂತರದ ದಿನಗಳಲ್ಲಿ ಜನರ ಮಾನಸಿಕ ಸಮಸ್ಯೆಗಳಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ಖ್ಯಾತ ಮನೋವೈದ್ಯ ಡಾ. ಬಿ ವಿ ಭಂಡಾರಿ ಹೇಳಿದ್ದಾರೆ.

ಉಡುಪಿಯ ಪತ್ರಿಕಾ ಭವನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು , ಕೋವಿಡ್ ಸಂದರ್ಭದಲ್ಲಿ ಹಲವು ಜನರು ಆರ್ಥಿಕವಾಗಿ ನಷ್ಟಕ್ಕೆ ಒಳಗಾಗಿದ್ದರು. ಇನ್ನು ಹಲವರು ತಮ್ಮವರನ್ನು ಕಳೆದುಕೊಂಡ ಕಾರಣಕ್ಕಾಗಿ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು.

ಅದೇ ಸಂದರ್ಭದಲ್ಲಿ ಡಿಜಿಟಲ್ ಅಡಿಕ್ಷನ್ ಕೂಡ ಹಲವರಲ್ಲಿ ಸಮಸ್ಯೆಗೆ ಕಾರಣವಾಗಿದೆ. ಮೊಬೈಲ್ ಗೀಳು ಯುವ ಜನತೆ ಮತ್ತು ವೃದ್ಧರನ್ನು ಸಹ ಸಾಕಷ್ಟು ಕಾಡುತ್ತಿದೆ. ಮೊಬೈಲ್ ಗೀಳಿನಿಂದಾಗಿ ಸಮಸ್ಯೆಗೆ ಒಳಗಾಗುವುದರ ಜೊತೆಗೆ ನಷ್ಟಕ್ಕೆ ಒಳಗಾದವರೂ ಅನೇಕರು ಇದ್ದಾರೆ ಎಂಬುದು ತಮ್ಮ ಗಮನಕ್ಕೆ ಬಂದಿದೆ.

ಹೀಗೆ ಕೊರೋನಾ ಬಳಿಕದ ಕಳೆದ ನಾಲ್ಕು ವರ್ಷಗಳಲ್ಲಿ ಜನರ ಮಾನಸಿಕ ಸಮಸ್ಯೆಯಲ್ಲಿ ಹೆಚ್ಚಳ ಕಂಡುಬಂದಿರುವುದು ಅಧ್ಯಯನಗಳಲ್ಲೂ ಸಾಬೀತಾಗಿದೆ ಎಂದು ಹೇಳಿದ್ದಾರೆ.