Home Crime ವಿದ್ಯಾರ್ಥಿಯೊಬ್ಬನ ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ…!!

ವಿದ್ಯಾರ್ಥಿಯೊಬ್ಬನ ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ…!!

ಲಕ್ನೋ: ಗಾಜಿಯಾಬಾದ್‌ನಲ್ಲಿ ವಿದ್ಯಾರ್ಥಿಯೊಬ್ಬನನ್ನು ಕೊಲೆಗೈದ ಪ್ರಮುಖ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಮಾಹಿತಿ ತಿಳಿದು‌ ಬಂದಿದೆ.

ಖೋಡಾದ ನವನೀತ್ ವಿಹಾರ್ ಕಾಲೋನಿಯ ನಿವಾಸಿಯ ಸೂರ್ಯನನ್ನು ಕೊಲೆಗೈದ ಬಳಿಕ ಆರೋಪಿ ಅಸಾದ್ ತಲೆಮರೆಸಿಕೊಂಡಿದ್ದ. ಇಂದು ಇಂದಿರಾಪುರದ ಅಭಯ್ ಖಂಡ್ ಪ್ರದೇಶದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದಾರೆ.

ಮೇ 28ರಂದು ನಡೆದ ಜಗಳದಲ್ಲಿ ವಿದ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಇರಿಯಲಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ನೊಯ್ಡಾದ ಖಾಸಗಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದ ಎನ್ನಲಾಗಿದೆ.

ಕುಟುಂಬದವರ ದೂರಿನ ಮೇಲೆ ಐದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಇನ್ನುಳಿದ ಐದು ಆರೋಪಿಗಳನ್ನು ಪತ್ತೆ ಹಚ್ಚಲು ಶೋಧ ಕಾರ್ಯ ಮುಂದುವರೆದಿದೆ ಎಂದು ಉಪಪೊಲೀಸ್ ಆಯುಕ್ತ ಧವಲ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.