ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಪೊಲೀಸರು 5 ಜನರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.
ಬಂಧಿತರಲ್ಲಿ ನಿರ್ಮಲ್ ಸೇನ್‌ಗುಪ್ತಾ, ದೇಬಾಶಿಶ್ ದತ್ತ ಮತ್ತು ಕಾಜಲ್ ದಾಸ್ ಸೋನಾರ್‌ಪುರದ ದಕ್ಷಿಣದ ಮಾಜಿ ಟಿಎಂಸಿ ಶಾಸಕಿ ಲವ್ಲಿ ಮೈತ್ರಾ ಅವರ ಆಪ್ತರು ಎಂದು ವರದಿಯಾಗಿದೆ.
ಶನಿವಾರ ಅಭಿಷೇಕ್ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದಿಂದ ಹಾನಿಗೊಳಗಾದ ಕುಟುಂಬಸ್ಥರನ್ನು ಭೇಟಿ ಮಾಡಲು ಹೋಗಿದ್ದಾಗ ಹಲ್ಲೆ ನಡೆದಿತ್ತು. ತಮ್ಮ ಪಕ್ಷದ ಕಾರ್ಯಕರ್ತರ ಭೇಟಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಲ್ಲಿದ್ದ ಜನರ ಗುಂಪೊಂದು ಟಿಎಂಸಿ ಸಂಸದನನ್ನು ತಡದು ಮೊಟ್ಟೆ, ಕಲ್ಲುಗಳಿಂದ ಹಲ್ಲೆ ನಡೆಸಿದ್ದರು. ಹಲವು ಮಹಿಳೆಯವರು ಟಿಎಂಸಿ ನಾಯಕನ ಮೇಲೆ ಕಳ್ಳ ಕಳ್ಳ ಎಂದು ಘೋಷಣೆ ಕೂಗಿದ್ದರು. ಘಟನೆಯ ಸಂಪೂರ್ಣ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.




