ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್‌ನಲ್ಲಿ ಸಂಭವಿಸಿದೆ.
ಸಾವನ್ನಪ್ಪಿದವರು ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44 ) ಎಂದು ತಿಳಿದು ಬಂದಿದೆ.
ಲೋಕೇಶ್ ಅವರು ಕಲ್ಲಡ್ಕದ ನಯಾರ ಪೆಟ್ರೋಲ್ ಪಂಪ್ ನ ಮುಂಭಾಗದಲ್ಲಿ ರಸ್ತೆಯನ್ನು ದಾಟುವ ವೇಳೆ ಅತೀ ವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ರಿಕ್ಷಾದಲ್ಲಿ ಚಾಲಕನ ಪತ್ನಿ ಮಕ್ಕಳು ಹಾಗೂ ಮಾವ ಪ್ರಯಾಣಿಸುತ್ತಿದ್ದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಲೋಕೇಶ್ ಅವರು ಸುಭಾಷ್ ನಗರದ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿ ಸದಸ್ಯರಾಗಿದ್ದು, ಸಾಮಾಜಿಕವಾಗಿ ಹಾಗೂ ಧಾರ್ಮಿಕವಾಗಿ ಅನೇಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಹಾಗೂ ಎರಡು ಮಕ್ಕಳ ಸಹಿತ ಅನೇಕ ಬಂಧು ಬಳಗವನ್ನು ಅಗಲಿದ್ದಾರೆ.