Home Crime ಬಂಟ್ವಾಳ : ಮದರಸಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ….!!

ಬಂಟ್ವಾಳ : ಮದರಸಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ….!!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮದರಸಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನಾ ಸಂಬಂಧ ವ್ಯಕ್ತಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.


5ನೇ ತರಗತಿ ಕಲಿಯುತ್ತಿರುವ ಬುದ್ದಿಮಾಂದ್ಯ ಬಾಲಕಿ ಮದರಸಕ್ಕೆ ಬಂದಿದ್ದ ವೇಳೆ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು, ಬಾಲಕಿಯ ತಾಯಿ ಆರೋಪಿಯ ವಿರುದ್ಧ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.