ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಸಾಲಿಗ್ರಾಮ ಚಿತ್ರಪಾಡಿ ಗ್ರಾಮದ ನಿವಾಸಿ ಕಾರ್ತಿಕ ಅಡಿಗ (33) ಎಂದು ಗುರುತಿಸಲಾಗಿದೆ.
ಇವರು ಕಳೆದ ಸುಮಾರು ಎರಡು ತಿಂಗಳಿನಿಂದ ಜ್ವರ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದು, ಈ ಸಂಬಂಧ ಸ್ಥಳೀಯ ಆಸ್ಪತ್ರೆ ಮತ್ತು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೇ 30ರಂದು ಬೆಳಿಗ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಮೃತರ ಸಂಬಂಧಿಕ ಎಸ್. ಶ್ರೀನಿವಾಸ ಅಡಿಗ ನೀಡಿದ ಮಾಹಿತಿಯಂತೆ ಕೋಟ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ.




