Home Crime ಚಿತ್ರದುರ್ಗ : ಕಾರು ಪಲ್ಟಿ : ಮಗು‌ ಸೇರಿ‌ ಮೂವರು‌ ಮೃತ್ಯು…!!

ಚಿತ್ರದುರ್ಗ : ಕಾರು ಪಲ್ಟಿ : ಮಗು‌ ಸೇರಿ‌ ಮೂವರು‌ ಮೃತ್ಯು…!!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಕಾರು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರು ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಎಂದು ತಿಳಿಯಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ

ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.