ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆಯಲ್ಲಿ ಕಟ್ಟಡದ ಆವರಣದಲ್ಲಿ ಯುವಕನೊಬ್ಬನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್ ಗೌಡ (32) ಎಂಬಾತನ ಮೃತದೇಹ ಇದಾಗಿದೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಕಾಂಪ್ಲೆಕ್ಸ್ ಆವರಣದಲ್ಲಿ ಜೂನ್ 1 ರಂದು ಬೆಳಗ್ಗೆ 7 ಗಂಟೆಗೆ ಶವ ಪತ್ತೆಯಾಗಿದೆ. ಈ ಸಾವಿನ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿದ್ದು, ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಷ್ಠಧಿಕಾರಿ ಡಾ.ಅರುಣ್ ಕುಮಾರ್, ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮ ರೆಡ್ಡಿ, ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಮತ್ತು ತಂಡ, ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.




