Home Crime ಸರಣಿ ಅಪಘಾತ : ಇಬ್ಬರು ಸಾವು…!!

ಸರಣಿ ಅಪಘಾತ : ಇಬ್ಬರು ಸಾವು…!!

ಮಾನ್ವಿ : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಶನಿವಾರ ಸಂಜೆ ಬೈಕ್ ಹಾಗೂ ಎರಡು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ನಡೆದಿದೆ. ಅದರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.

ಮೃತರನ್ನು ಬೈಕ್ ಸವಾರ ಶೇಖರಪ್ಪ (25) ಹಾಗೂ ಆತನ ಸಹೋದರಿ ಮರಿಯಮ್ಮ(28) ಎಂದು ಗುರುತಿಸಲಾಗಿದೆ. ಎರಡು ವರ್ಷದ ಮಗಳು ಗೌತಮಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕರೆಗುಡ್ಡ ಗ್ರಾಮದಲ್ಲಿ ಶನಿವಾರ ಜಾತ್ರೆ ಇತ್ತು. ಹೀಗಾಗಿ ಕರೆಗುಡ್ಡ ಗ್ರಾಮದ ನಿವಾಸಿಯಾದ ಶೇಖರಪ್ಪ ತನ್ನ ಅಕ್ಕನನ್ನು ಮರಿಯಮ್ಮನ ಜಾತ್ರೆಗೆ ಕರೆದುಕೊಂಡಲು ಬರಲು ವಲ್ಕಂದಿನ್ನಿ ಗ್ರಾಮಕ್ಕೆ ತೆರಳಿದ್ದರು.

ಅಲ್ಲಿಂದ ​ಅಕ್ಕ ಹಾಗೂ ಅವರ ಎರಡು ವರ್ಷದ ಮಗಳನ್ನು ಬೈಕ್​ನಲ್ಲಿ ಕೂರಿಸಿಕೊಂಡು ಕರೆಗುಡ್ಡ ಗ್ರಾಮಕ್ಕೆ ಬರುತ್ತಿರುವಾಗ ಕೊಪ್ಪಳದ ದೇಸಾಯಿ ಕ್ಯಾಂಪ್​ಗೆ ತೆರಳುತ್ತಿದ್ದ ಕಾರೊಂದು ವೇಗವಾಗಿ ಚಲಿಸುತ್ತಿರುವ ಸಂದರ್ಭದಲ್ಲಿ ಇವರ ಬೈಕ್​ಗೆ ಢಿಕ್ಕಿ ಹೊಡೆದಿದೆ. ಬಳಿಕ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಆ ಕಾರು ಪಲ್ಟಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಾನ್ವಿ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.