Home Karnataka ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ, ಬೇರೆ ಪಟಾಕಿ ಮಾರಿದರೆ ಅಂಗಡಿ ಲೈಸೆನ್ಸ್‌ ರದ್ದು :...

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ, ಬೇರೆ ಪಟಾಕಿ ಮಾರಿದರೆ ಅಂಗಡಿ ಲೈಸೆನ್ಸ್‌ ರದ್ದು : ಈಶ್ವರ ಖಂಡ್ರೆ…!!

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು, ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸೆನ್ಸ್‌ ಕ್ಯಾನ್ಸಲ್‌ ಮಾಡಲಾಗುವುದು ಎಂದು ಸಚಿವ ಈಶ್ವರ್‌ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದ್ದು, ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಹಸಿರು ಪಟಾಕಿ ಬಿಟ್ಟು ಬೇರೆಯದಕ್ಕೆ ಅವಕಾಶ ನೀಡಬಾರದೆಂದು. ಮಳಿಗೆಗಳಿಗೆ ಹೋಗಿ ಪರಿಶೀಲನೆ ಮಾಡಬೇಕು. ಪರಿಸರ ಸ್ನೇಹಿ ಪಟಾಕಿ ಮಾರುತ್ತೇವೆ ಎಂದು ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ.

ಯಾರಾದರೂ ನಿಯಮ ಉಲ್ಲಂಘನೆ ಮಾಡಿದರೆ ಪಟಾಕಿ ಮಾರಿದರೆ ಅವರ ಲೈಸೆನ್ಸ್‌ ರದ್ದು ಮಾಡಲಾಗುವುದು ಎಂದು ಸಚಿವರು ವಿಧಾನಸೌಧದಲ್ಲಿ ಮಾತನಾಡುತ್ತಾ ಹೇಳಿದರು.