ಬೆಳ್ತಂಗಡಿ : ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಯತೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪದಂಗಡಿ ನಿವಾಸಿ ಇಬ್ರಾಹಿಂ (54) ಮೂವರನ್ನು ಮಂಗಳವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಯತೀಶ್‌ಗೆ ಆರೋಪಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಯತೀಶ್ ಸಹೋದರ ಪೊಲೀಸರಿಗೆ ದೂರು ನೀಡಿದ್ದರು.




