Home Crime ಧರ್ಮಸ್ಥಳ ಕೇಸ್ : ನಿಗದಿತ ಕಾಲಮಿತಿಯಲ್ಲೇ ತನಿಖೆ ಪೂರ್ಣಗೊಳಿಸಬೇಕೆಂದು ಒತ್ತಡ ಹೇರುವುದು ಸರಿಯಲ್ಲ : ಡಾ....

ಧರ್ಮಸ್ಥಳ ಕೇಸ್ : ನಿಗದಿತ ಕಾಲಮಿತಿಯಲ್ಲೇ ತನಿಖೆ ಪೂರ್ಣಗೊಳಿಸಬೇಕೆಂದು ಒತ್ತಡ ಹೇರುವುದು ಸರಿಯಲ್ಲ : ಡಾ. ಪರಮೇಶ್ವರ್…!!

ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದೆ. ನಿಗದಿತ ಕಾಲಮಿತಿಯಲ್ಲೇ ತನಿಖೆ ಪೂರ್ಣಗೊಳಿಸಬೇಕೆಂದು ಒತ್ತಡ ಹೇರುವುದು ಸರಿಯಲ್ಲ ಎಂದು ಹೇಳಿದರು.

ವಿವಿಧ ದೃಷ್ಟಿಕೋನಗಳಿಂದ ತನಿಖೆ ನಡೆಸಬೇಕಿದೆ. ಅಗತ್ಯ ಪುರಾವೆಗಳನ್ನು ಸಂಗ್ರಹಿಸಬೇಕಿದೆ. ಹೀಗಾಗಿ ಎಸ್‍ಐಟಿ ಆದ್ಯತೆ ಮೇಲೆ ತನಿಖೆ ನಡೆಸುತ್ತಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.