Home Karnataka News ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ…!!

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ…!!

ಬೆಂಗಳೂರು : ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೇರಳಂ ಸಿಎಂ ಸತೀಶನ್, ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್ಗಳ ಮುಖ್ಯಸ್ಥರು, ಸಿನಿ ತಾರೆಯರು ಸೇರಿ ಡಿಕೆಶಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಶಿವಕುಮಾರ್ ಕಾಣಿಸಿಕೊಂಡಿರೋದು ಗಮನಸೆಳೆಯಿತು.

ಬಿಜೆಪಿಯ ಉಚ್ಛಾಟಿತ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಕೂಡ ಈ ವೇಳೆ ಕಾಣಿಸಿಕೊಂಡಿದ್ದಾರೆ.