Home Latest ಯುವ ನಾಯಕ ಅಶ್ವಿನ್ ಕೋಟ್ಯಾನ್ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ…!!

ಯುವ ನಾಯಕ ಅಶ್ವಿನ್ ಕೋಟ್ಯಾನ್ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ…!!

ಪಡುಬಿದ್ರಿ: ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ನ ಯುವ ಕಾಂಗ್ರೆಸ್ ಪಾಳಯಕ್ಕೆ ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಪಡುಬಿದ್ರಿಯ ಅಶ್ವಿನ್ ಕೋಟ್ಯಾನ್ ನೇಮಕಗೊಂಡಿದ್ದಾರೆ.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ರವರ ನಿರ್ದೇಶನದ ಮೇರೆಗೆ ಅಶ್ವಿನ್ ಕೋಟ್ಯಾನ್ ರವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಉಭಯ ಜಿಲ್ಲೆಗಳಲ್ಲಿ ಯುವ ಉದ್ಯಮಿ ಹಾಗೂ ಯುವ ನಾಯಕನಾಗಿ ಗುರುತಿಸಿಕೊಂಡಿರುವ ಅಶ್ವಿನ್ ರವರು ಸಾಮಾಜಿಕ ಕ್ಷೇತ್ರದ ಸಕ್ರಿಯತೆಯಿಂದ ಯುವ ಪಾಳಯದಲ್ಲಿ ಗುರುತಿಸಿಕೊಂಡವರು. ಕಾಂಗ್ರೆಸ್ ನ ಹಿರಿಯ ಮುಖಂಡ ದಿ. ಮೋಹನ್ ಕೆ ರವರ ಪುತ್ರರಾಗಿರುವ ಅಶ್ವಿನ್ ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷದ ಸಾಮಾರ್ಥ್ಯವನ್ನು ಮತ್ತಷ್ಟು ಬಲಪಡಿಸಲು ಸ್ಪಷ್ಟ ಆಯ್ಕೆಯಾಗಿ ಪರಿಣಾಮ ಬೀರಲಿದೆ. ಯುವ ಸಮೂಹದಲ್ಲಿ ವ್ಯಾವಹಾರಿಕ ಉತ್ತೇಜನ, ಶಿಕ್ಷಣ, ಸಮುದಾಯ ಅಭಿವೃದ್ಧಿಯಂತಹ ಹಲವಾರು ಕೆಲಸಗಳಲ್ಲಿ ಅಶ್ವಿನ್ ತೊಡಗಿಕೊಂಡಿದ್ದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಬದಲಾವಣೆಯಾಗಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಅಶ್ವಿನ್ ಕೋಟ್ಯಾನ್ ರವರು ರಾಜ್ಯದ ಮುಖ್ಯಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷ ಮಂಜುನಾಥ್ ಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಎ ಶೆಟ್ಟಿ ಹಾಗೂ ಯುವ ಕಾಂಗ್ರೆಸ್ ಉಸ್ತುವಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಕಾರದೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯನಿರ್ವಹಿಸುವಂತೆ ಕೋರಲಾಗಿದೆ.