ಉಡುಪಿ : ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಹಾಗೂ ಮಕ್ಕಳ ಸರಕಾರಿ ಆಸ್ಪತ್ರೆ -ಕಟ್ಟಡ ವಿದೇಶಿ ಮಾದರಿಯಲ್ಲಿ ನಿರ್ಮಾಣಗೊಂಡಿದ್ದು, ಸರ್ಕಾರಕ್ಕೆ ನಿರ್ವಹಣೆ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಮೂರು ಮಹಡಿಗಳನ್ನು ಮರುವಿನ್ಯಾಸಗೊಳಿಸಲು ತಾಂತ್ರಿಕ ತಜ್ಞರಿಂದ ವರದಿ ಪಡೆಯಲು ನಿರ್ಧರಿಸಲಾಗಿದ್ದು, ರಾಜ್ಯ ಸರ್ಕಾರ ಸೂಕ್ತ ಅನುದಾನ ಬಿಡುಗಡೆಗೊಳಿಸಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದರು.
ಜಿಲ್ಲಾ ಸರ್ಜನ್ ಡಾ. ಅಶೋಕ್, ಆಸ್ಪತ್ರೆ ಉಪ ವೈದ್ಯಾಧಿಕಾರಿ ಸಂದೀಪ್ ಉಪಸ್ಥಿತರಿದ್ದರು.




