Home Crime 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಮಂಗಳೂರು : ನಗರದ ಸಮೀಪ ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ.

ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ದಂಗೆ, ಶಸ್ತ್ರ ಪ್ರಯೋಗ, ಹಾನಿ ಮತ್ತು ಬೆದರಿಕೆ ಸೇರಿ ಹಲವು ಪ್ರಕರಣ ದಾಖಲಾಗಿತ್ತು.

ಈತನ ಬಗ್ಗೆ ಮಂಗಳೂರು 2ನೇ ಸಿ.ಜೆ.ಎಂ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಲಾಗಿದ್ದು, ವಿಚಾರಣೆ ನಡೆಯುತ್ತಿತ್ತು.

ಆದರೆ ವಿಚಾರಣೆಯ ಸಮಯದಲ್ಲಿ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ, ನ್ಯಾಯಾಲಯವು ದೀರ್ಘಕಾಲದಿಂದ ಬಾಕಿ ಇರುವ ಪ್ರಕರಣ ಎಂದು ಪರಿಗಣಿಸಿತ್ತು.

ಖಚಿತ ಮಾಹಿತಿಯ ಮೇರೆಗೆ, ಉತ್ತರ ಠಾಣೆಯ ಎಎಸ್‌ಐ ಬಾಬು, ಗುರು ಬಿ.ಟಿ ಮತ್ತು ಸುನಿಲ್ ಕುಮಾರ್ ಎನ್ ಅವರ ತಂಡವು ಅಕ್ಟೋಬರ್ 5ರಂದು ಮಂಗಳೂರು ಬಂದರು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

ಬಂಧಿತನನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.